ಎಸ್ಸಿಪಿ-ಟಿಎಸ್ಪಿ ಅನುದಾನ ಸದ್ಬಳಕೆಗೆ ಡಿಸಿಎಂ ಡಾ.ಪರಮೇಶ್ವರ್ ಸೂಚನೆ
Update: 2019-01-08 20:09 IST
ಬೆಂಗಳೂರು, ಜ. 8: ಸಮಾಜ ಕಲ್ಯಾಣ ಇಲಾಖೆಯಿಂದ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಬಿಬಿಎಂಪಿಗೆ ನೀಡಿರುವ ಅನುದಾನವನ್ನು ನಗರದಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಮನೆ ನಿರ್ಮಾಣ, ರಸ್ತೆ, ನೀರು, ಶಿಕ್ಷಣಕ್ಕೆ ಬಳಕೆ ಮಾಡುವಂತೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಸೂಚಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಎಸ್ಸಿ-ಎಸ್ಟಿ ಸಮುದಾಯದವರಿಗೆ ಪ್ರತಿ ಇಲಾಖೆಗೂ ಅನುದಾನ ನೀಡಲಾಗುತ್ತಿದೆ. ಈ ಹಣವನ್ನು ಯಾವುದೇ ಕಾರಣಕ್ಕೂ ರಸ್ತೆ ಅಗಲೀಕರಣದಂತಹ ಬೇರೆ ಯಾವುದೇ ಕೆಲಸಕ್ಕೂ ಬಳಕೆ ಮಾಡಿಕೊಳ್ಳಬಾರದು ಎಂದರು.
ಎಸ್ಸಿ-ಎಸ್ಟಿ ಸಮುದಾಯದವರು ವಾಸವಿರುವ ಕಾಲನಿಗಳನ್ನು ಗುರುತಿಸಿ, ಆ ಭಾಗದಲ್ಲಿ ಅವರಿಗೆ ನಿವಾಸ, ಕುಡಿಯುವ ನೀರು, ಶಿಕ್ಷಣ ಇತರೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಹಣ ಬಳಕೆ ಮಾಡಿಕೊಳ್ಳುವಂತೆ ಪರಮೇಶ್ವರ್ ಸೂಚನೆ ನೀಡಿದರು.