ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣ: ರಾಕ್‌ಲೈನ್ ವೆಂಕಟೇಶ್ ಹಾಜರು
Update: 2019-01-08 20:11 IST
ಬೆಂಗಳೂರು, ಜ.8: ಸಿನೆಮಾ ನಟ-ನಿರ್ಮಾಪಕರ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣ ಸಂಬಂಧ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಂಗಳವಾರ ವಿಚಾರಣೆಗೆ ಹಾಜರಾದರು ಎನ್ನಲಾಗಿದೆ.
ಆದಾಯ ತೆರಿಗೆ ಇಲಾಖೆ ನೀಡಿದ್ದ ನೋಟಿಸ್ ಅನ್ವಯ ಅವರು, ನಗರದ ಆದಾಯ ತೆರಿಗೆ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು ಎಂದು ಮೂಲಗಳು ತಿಳಿಸಿವೆ.
ಇನ್ನೂ, ನಟರಾದ ಶಿವರಾಜ್ ಕುಮಾರ್, ಪುನೀತ್ ರಾಜ್‌ಕುಮಾರ್, ಸುದೀಪ್ ಅವರೂ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಸೋಮವಾರ ನಿರ್ಮಾಪಕರಾದ ವಿಜಯ್ ಕಿರಂಗದೂರು, ಮನೋಹರ್ ವಿಚಾರಣೆಗೆ ಹಾಜರಾಗಿದ್ದರು.