ಮಿತ್ತಬೈಲು ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ನಿಧನ: ಸಚಿವ ಖಾದರ್ ಸಂತಾಪ
Update: 2019-01-08 20:37 IST
ಮಂಗಳೂರು, ಜ. 8: ಸಮಸ್ತದ ಮಹಾನ್ ನೇತಾರ, ಪ್ರಸ್ತುತ ಸಮಸ್ತದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಶೈಖುನಾ ಮಿತ್ತಬೈಲ್ ಅಬ್ದುಲ್ ಜಬ್ಬಾರ್ ಉಸ್ತಾದ್ ಅವರ ನಿಧನ ಸುದ್ದಿ ಕೇಳಿ ಮನಸ್ಸಿಗೆ ಬಹಳ ಆಘಾತವಾಯಿತು ಎಂದು ಸಚಿವ ಯು.ಟಿ.ಖಾದರ್ ಸಂತಾಪ ಸೂಚಿಸಿದ್ದಾರೆ.
ಅವರ ಅಗಲುವಿಕೆಯು ಸಮುದಾಯ, ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಸಚಿವ ಯು.ಟಿ. ಖಾದರ್ ಸಂತಾಪ ವ್ಯಕ್ತಪಡಿಸಿದ್ದು, ಅವರ ಅಗಲುವಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.