×
Ad

ಸಮಸ್ತ ಉಪಾಧ್ಯಕ್ಷ ಮಿತ್ತಬೈಲ್ ಅಬ್ದುಲ್ ಜಬ್ಬಾರ್ ಉಸ್ತಾದರ ನಿಧನಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್, ಸಂಘಸಂಸ್ಥೆಗಳು ಸಂತಾಪ

Update: 2019-01-08 22:03 IST

ಮಂಗಳೂರು, ಜ.8: ಖ್ಯಾತ ವಿದ್ವಾಂಸರು ಸಮಸ್ತ ಉಪಾಧ್ಯಕ್ಷ ಶೈಖುನಾ ಮಿತ್ತಬೈಲ್ ಅಬ್ದುಲ್ ಜಬ್ಬಾರ್ ಉಸ್ತಾದರ ನಿಧನಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ,  ಮಾಜಿ ಶಾಸಕ ಜೆ.ಆರ್.ಲೋಬೊ, ಗೇರು ನಿಗಮ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ಮಾಜಿ ರಾಜ್ಯಸಭಾ ಸದಸ್ಯರಾದ ಬಿ.ಇಬ್ರಾಹೀಂ, ಮನಪಾ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ, ಬದ್ರಿಯಾ ಜುಮ್ಮಾ ಮಸೀದಿ ಬಜಾಲ್ ನಂತೂರು ಅಧ್ಯಕ್ಷ ಹಾಗೂ ಮನಪಾ ಸದಸ್ಯರಾದ ಅಬ್ದುಲ್ ರವೂಫ್, ಮಾಜಿ ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.

ಡಿವೈಎಫ್‌ಐ

ಹಿರಿಯ ಸುನ್ನಿ ವಿದ್ವಾಂಸ, ಸರಳತೆ ನಿರಾಡಂಬರತೆಯ ಪ್ರತೀಕವಾಗಿದ್ದ ಮಿತ್ತಬೈಲು ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಅವರ ನಿಧನಕ್ಕೆ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಿತ್ತಬೈಲು ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಅವರ ನಿಧನವು ಜನಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ವೈಯಕ್ತಿಕ ಬಹಳ ನೋವನ್ನು ಉಂಟುಮಾಡಿದೆ. ಸಮುದಾಯ ಮತ್ತು ಸಮಾಜದ ಸಾಮರಸ್ಯತೆಗೆ ಉಸ್ತಾದರ ಕೊಡುಗೆ ಅವಸ್ಮರಣೀಯವಾದುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪಾಪ್ಯುಲರ್ ಫ್ರಂಟ್ ಸಂತಾಪ

ಸಾವಿರಾರು ಉಲಮಾಗಳನ್ನು ಸಮುದಾಯಕ್ಕೆ ಅರ್ಪಿಸಿದ ಖ್ಯಾತ ವಿದ್ವಾಂಸರು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರಾದ  ಶೈಖುನಾ ಅಬ್ದುಲ್ ಜಬ್ಬಾರ್ ಉಸ್ತಾದ್ ಸಮುದಾಯಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ  ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ  ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ  ಹನೀಫ್ ಕಾಟಿಪಳ್ಳ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಮಸ್ತ ಉಪಾಧ್ಯಕ್ಷ ಮಿತ್ತಬೈಲ್ ಉಸ್ತಾದರ ವಿಯೋಗಕ್ಕೆ ದ ಕ ಜಿಲ್ಲಾ ಅಝ್ಹರೀಸ್ ಅಸೋಷಿಯೇಶನ್ ಕಂಬನಿ ಮಿಡಿದಿದೆ ಎಂದು ಅಧ್ಯಕ್ಷರಾದ ನಝೀರ್ ಅಝ್ಹರಿ ಬೊಳ್ಮಿನಾರ್ ತಿಳಿಸಿದ್ದಾರೆ.

ಸಮಸ್ತದ ಮಹಾನ್ ನೇತಾರ, ಪ್ರಸ್ತುತ ಸಮಸ್ತದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಶೈಖುನಾ ಮಿತ್ತಬೈಲ್ ಅಬ್ದುಲ್ ಜಬ್ಬಾರ್ ಉಸ್ತಾದ್ ಅವರ ನಿಧನ ಸುದ್ದಿ ಕೇಳಿ ಮನಸ್ಸಿಗೆ ಬಹಳ ಆಘಾತವಾಯಿತು ಎಂದು ಎಸ್ಕೆಎಸ್ಸೆಸೆಫ್ ಅಡ್ಡೂರ್ ಕ್ಲಸ್ಟರ್ ಸಂಘಟನಾ  ಕಾರ್ಯದರ್ಶಿ ಅಬ್ದುಲ್ ಸಲಾಂ, ಕತಾರ್ ಇಂಡಿಯನ್ ಸೋಷಿಯಲ್ ಫೋರಂ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಅಶ್ರಫ್ ಕಿನಾರ, ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News