8 ಲಕ್ಷ ರೂ.ಗಿಂತ ಕಡಿಮೆ ಆದಾಯವಿರುವವರಿಗೆ ಮೇಲ್ಜಾತಿ ಮೀಸಲಾತಿಯಿಂದ ಪ್ರಯೋಜನ: ಅಮಿತ್ ಶಾ

Update: 2019-01-08 17:00 GMT

ಹೊಸದಿಲ್ಲಿ, ಜ.8: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನರಿಗೆ 10 ಶೇ. ಮೀಸಲಾತಿಯಿಂದಾಗಿ 8 ಲಕ್ಷ ರೂ.ಗಿಂತ ಕಡಿಮೆ ಆದಾಯವಿರುವವರಿಗೆ ಪ್ರಯೋಜನವಾಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಶಿಕ್ಷಣ ಹಾಗು ಉದ್ಯೋಗ ಕ್ಷೇತ್ರದಲ್ಲಿ ಮೀಸಲಾಯಿತಿಯಿಂದ ಕೋಟ್ಯಾಂತರ ಯುವಕರಿಗೆ ಪ್ರಯೋಜನವಾಗಲಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ಜೊತೆಗಿನ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

“8 ಲಕ್ಷ ರೂ.ಗಿಂತ ಕಡಿಮೆ ವಾರ್ಷಿಕ ಆದಾಯವಿರುವವರಿಗೆ ಇದು ಸಹಕಾರಿಯಾಗಲಿದೆ. ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಈ ಮೀಸಲಾತಿಯಿಂದ ಕೋಟ್ಯಾಂತರ ಯುವಜನರು ಲಾಭ ಪಡೆಯಲಿದ್ದಾರೆ. ಎಸ್ಸಿ, ಎಸ್ಟಿ ಮತ್ತು ಒಬಿಸಿಯ 50 ಶೇ. ಮೀಸಲಾತಿಗೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ” ಎಂದವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News