ಆತ್ಮಹತ್ಯೆಗೆ ಯತ್ನಿಸಿದ್ದ ಚಿತ್ರನಟ ಯಶ್ ಅಭಿಮಾನಿ ಮೃತ್ಯು

Update: 2019-01-09 05:57 GMT

ಬೆಂಗಳೂರು, ಜ.9: ಕನ್ನಡ ಚಿತ್ರನಟ ಯಶ್ ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿಯೊಬ್ಬ ಗುರುವಾರ ಮೃತಪಟ್ಟಿದ್ದಾನೆ.

 ಜನವರಿ 8, ಬುಧವಾರ ಯಶ್ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಯಶ್‌ಗೆ ಹುಟ್ಟುಹಬ್ಬ ಶುಭಾಶಯ ಕೋರಲು ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ಮನೆ ಮುಂದೆ ಹೋಗಿದ್ದ ಕೂಲಿ ಕಾರ್ಮಿಕ ನೆಲಮಂಗಲದ ರವಿ (29 ವರ್ಷ)ಎಂಬಾತ ತನ್ನ ಹೀರೋನನ್ನು ಕಾಣಲು ಸಾಧ್ಯವಾಗಲಿಲ್ಲ ಎಂಬ ಹತಾಶೆಯಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

 ತಕ್ಷಣವೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂದು ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News