ಭಾರತೀಯ ಕಾರ್ಯಕ್ರಮದಿಂದ ನಮ್ಮ ಸಂಸ್ಕೃತಿ ನಾಶ: ಪಾಕ್ ಸುಪ್ರೀಂ ಕೋರ್ಟ್

Update: 2019-01-09 16:50 GMT

ಇಸ್ಲಾಮಾಬಾದ್, ಜ. 9: ಪಾಕಿಸ್ತಾನದ ಟಿವಿ ಚಾನೆಲ್‌ಗಳಲ್ಲಿ ಭಾರತದ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು ದೇಶದ ಸುಪ್ರೀಂ ಕೋರ್ಟ್ ಅನುಮತಿ ನೀಡುವುದಿಲ್ಲ ಎಂದು ಪಾಕಿಸ್ತಾನದ ಮುಖ್ಯ ನ್ಯಾಯಾಧೀಶ ಸಾಕಿಬ್ ನಿಸಾರ್ ಬುಧವಾರ ಹೇಳಿದ್ದಾರೆ.

ಪಾಕಿಸ್ತಾನದ ಟಿವಿ ಚಾನೆಲ್‌ಗಳಲ್ಲಿ ಭಾರತದ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದನ್ನು ನಿಷೇಧಿಸುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಪಾಕಿಸ್ತಾನ್ ಇಲೆಕ್ಟ್ರಾನಿಕ್ ಮಾಧ್ಯಮ ನಿಯಂತ್ರಣ ಪ್ರಾಧಿಕಾರ ಸಲ್ಲಿಸಿದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ಮೂವರು ನ್ಯಾಯಾಧೀಶರ ಪೀಠವೊಂದು ನಡೆಸಿದ ವೇಳೆ, ಮುಖ್ಯ ನ್ಯಾಯಾಧೀಶರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

‘‘ಪಾಕಿಸ್ತಾನದ ಟಿವಿ ಚಾನೆಲ್‌ಗಳಲ್ಲಿ ಭಾರತೀಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು ನಾವು ಅವಕಾಶ ನೀಡುವುದಿಲ್ಲ. ಅವುಗಳು ನಮ್ಮ ಸಂಸ್ಕೃತಿಯನ್ನು ಹಾಳು ಮಾಡುತ್ತವೆ’’ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News