ಗಾಂಜಾ ಮಾರಾಟ: ಮೂವರು ಆರೋಪಿಗಳ ಬಂಧನ

Update: 2019-01-09 17:12 GMT

ಶಿವಮೊಗ್ಗ, ಜ. 9: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಮೂವರನ್ನು ಬಂಧಿಸಿದ ಘಟನೆ ಜಿಲ್ಲೆಯ ಭದ್ರಾವತಿ ಪಟ್ಟಣದ ಜಟ್‍ಪಟ್ ನಗರದ ವಾಟರ್ ಟ್ಯಾಂಕ್ ಹತ್ತಿರ ವರದಿಯಾಗಿದೆ. 

ಜಾಕೀರ್ ಹುಸೇನ್ (45), ಶಾಹೀದಖಾನ್ (20), ಬಾಷಾ (19) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಆರೋಪಿಗಳು ಪ್ಯಾಕೆಟ್‍ಗಳಲ್ಲಿ ಗಾಂಜಾ ತುಂಬಿ ಮಾರಾಟ ಮಾಡುತ್ತಿದ್ದರು. ಖಚಿತ ವರ್ತಮಾನದ ಮೇರೆಗೆ ಸಬ್ ಇನ್ಸ್‍ಪೆಕ್ಟರ್ ಭರತ್‍ಕುಮಾರ್ ರವರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಬಂಧಿತ ಆರೋಪಿಗಳಿಂದ ಪೊಲೀಸರು 750 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದು, ಇದರ ಮೌಲ್ಯ 7500 ರೂ.ಗಳೆಂದು ಅಂದಾಜಿಸಲಾಗಿದೆ. ಈ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News