ಬೈಕ್ ಢಿಕ್ಕಿ: ರಸ್ತೆ ದಾಟುತ್ತಿದ್ದ ವೃದ್ಧ ಮೃತ್ಯು
Update: 2019-01-09 23:28 IST
ಮಂಗಳೂರು, ಜ.9: ತಾಲೂಕಿನ ಜೆಪ್ಪಿನಮೊಗರು ಎಂಬಲ್ಲಿನ ದ.ಕ. ಗ್ಯಾರೇಜ್ ಮಾಲಕರ ಸಂಘದ ಕಟ್ಟಡದ ಮುಂಭಾಗ ರಸ್ತೆಯನ್ನು ದಾಟುತ್ತಿದ್ದ ವೃದ್ಧರೋರ್ವರಿಗೆ ಬೈಕ್ ಢಿಕ್ಕಿ ಹೊಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಚೆಂಬುಗುಡ್ಡೆ ನಿವಾಸಿ ಎಂ.ಮೊಯ್ದಿನ್ (65) ಮೃತರು ಎಂದು ಗುರುತಿಸಲಾಗಿದೆ.
ಮಂಗಳೂರು ಕಡೆಯಿಂದ ತೊಕ್ಕೊಟ್ಟು ಕಡೆಗೆ ಬೈಕ್‌ನಲ್ಲಿ ಸಹಸವಾರನನ್ನು ಕುಳ್ಳಿರಿಸಿಕೊಂಡು ಬರುತ್ತಿದ್ದ ಸವಾರನು ನಿಯಂತ್ರಣ ತಪ್ಪಿ ರಸ್ತೆ ದಾಟುತ್ತಿದ್ದ ಮೊಯ್ದಿನ್ ಅವರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಅವರು ಡಾಮಾರು ರಸ್ತೆಗೆ ಬಿದ್ದು ತಲೆಗೆ ತೀವ್ರ ಸ್ವರೂಪದ ಗಾಯ ಮತ್ತು ಎಡಕೈ ಮೂಳೆ ಮುರಿತದ ಗಾಯಗಳಾಗಿದ್ದವು. ಕೂಡಲೇ ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದರು.
ಈ ಕುರಿತು ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.