×
Ad

‘ರಾಜೀವ್ ಗಾಂಧಿ ಭೀಕರ ಹತ್ಯೆ’ ಪುಸ್ತಕ ಬಿಡುಗಡೆ ಮಾಡಿದ ಸಿಎಂ

Update: 2019-01-10 19:37 IST

ಬೆಂಗಳೂರು, ಜ.10: ಡಾ.ಡಿ.ವಿ.ಗುರುಪ್ರಸಾದ್ ಕನ್ನಡಕ್ಕೆ ಭಾವಾನುವಾದ ಮಾಡಿರುವ ಡಿ.ಆರ್.ಕಾರ್ತಿಕೇಯನ್ ರಚಿತ ‘ರಾಜೀವ್ ಗಾಂಧಿ ಭೀಕರ ಹತ್ಯೆ ಮಾದರಿ ತನಿಖೆಯ ಸೂಕ್ಷ್ಮ ಮಜಲುಗಳು’ ಪುಸ್ತಕವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ರಾಷ್ಟ್ರದ ಪ್ರಧಾನಮಂತ್ರಿಗಳಾಗಿ ಕಾರ್ಯನಿರ್ವಹಿಸಿದ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣವನ್ನು ತನಿಖೆ ಮಾಡಿ, ಆ ಬಗೆಗಿನ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಹೊರತಂದಿರುವುದಕ್ಕಾಗಿ ಡಿ.ಆರ್.ಕಾರ್ತಿಕೇಯನ್ ಹಾಗೂ ಕನ್ನಡಕ್ಕೆ ಭಾವಾನುವಾದ ಮಾಡಿರುವ ಡಾ.ಡಿ.ವಿ.ಗುರುಪ್ರಸಾದ್ ಅವರನ್ನು ಅಭಿನಂದಿಸಿದರು. ರಾಜ್ಯದ ಪೋಲಿಸ್ ಅಧಿಕಾರಿಗಳು ಅತ್ಯಂತ ಯಶಸ್ವಿಯಾಗಿ ಈ ಗಂಭೀರ ಪ್ರಕರಣದ ಯಶಸ್ವಿ ತನಿಖೆ ನಡೆಸಿದ್ದು ಶ್ಲಾಘನೀಯ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ಉತ್ತಮ ಅಧಿಕಾರಿಗಳು ಕಾರಣ. ಇಂತಹ ಪ್ರಾಮಾಣಿಕ ಅಧಿಕಾರಿಗಳನ್ನು ಮೈತ್ರಿ ಸರಕಾರ ಗುರುತಿಸಿ ಉತ್ತೇಜನ ನೀಡುತ್ತದೆ ಎಂದು ಅವರು ಹೇಳಿದರು.

ಈ ವೇಳೆ ಗೃಹ ಸಚಿವ ಎಂ.ಬಿ.ಪಾಟೀಲ್, ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್, ಡಾ.ಡಿ.ಆರ್.ಕಾರ್ತಿಕೇಯನ್, ಡಾ.ಡಿ.ವಿ.ಗುರುಪ್ರಸಾದ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News