ಕೆಎಸ್ಸಾರ್ಟಿಸಿ: ಸಂಕ್ರಾಂತಿ ಪ್ರಯುಕ್ತ 500 ಹೆಚ್ಚುವರಿ ಬಸ್ ಸೇವೆ

Update: 2019-01-10 15:36 GMT

ಬೆಂಗಳೂರು, ಜ.10: ಸಂಕ್ರಾಂತಿ ಹಬ್ಬದ ಪ್ರಯುಕ್ತ ಕೆಎರ್ಸ್ಸಾಟಿಸಿ ವತಿಯಿಂದ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಭಾಗಗಳಿಗೆ 500 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಜ.15ರಂದು ಮಕರ ಸಂಕ್ರಾಂತಿಹಬ್ಬ ಆಚರಣೆ ಇರುವುದರಿಂದ ಕೆಎಸ್ಸಾರ್ಟಿಸಿ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜ.11, 12ರಂದು ಬೆಂಗಳೂರಿನಿಂದ ರಾಜ್ಯದ ನಾನಾ ಭಾಗಗಳಿಗೆ 500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗೀರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆೆ ಹಲವು ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಹಾಗೂ ತಮಿಳುನಾಡಿನ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್, ಆಂಧ್ರಪ್ರದೇಶದ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ.

ಬೆಂಗಳೂರು ನಗರದ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೆ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೆ ಅಡ್ಡರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐಗೇಟ್, ಗಂಗಾನಗರ, ಕೆಂಗೇರಿಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ರಾಜ್ಯದ ನಾನಾ ಜಿಲ್ಲೆಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇ-ಟಿಕೇಟ್ ಬುಕ್ಕಿಂಗ್‌ನ್ನು http://www.ksrtc.in ವೆಬ್‌ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತಾರಾಜ್ಯದಲ್ಲಿರುವ 707 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇ.5ರಷು ್ಟರಿಯಾಯಿತಿ ನೀಡಲಾಗುವುದು, ಹೋಗುವ ಹಾಗೂ ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News