ರಫೀಕ್ ಮದನಿ ಉರುಮಣೆ

Update: 2019-01-11 05:41 GMT

ಮಂಗಳೂರು, ಜ.11: ಮಂಜನಾಡಿ ಸಮೀಪದ ನಾಟೆಕಲ್ ಬಳಿಯ ಉರುಮಣೆ ನಿವಾಸಿ ಮುಹಮ್ಮದ್ ರಫೀಕ್ ಮದನಿ ಉರುಮಣೆ (29) ಶುಕ್ರವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ನ್ಯುಮೋನಿಯಾದಿಂದ ಬಳಲುತ್ತಿದ್ದ ಇವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಸುಮಾರು 5:30ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ.

ನಗರದ ಬಂದರ್ ಅಲ್-ಅಝ್‌ಹರಿಯಾದಲ್ಲಿ ಮುಅಲ್ಲಿಮರಾಗಿ ಸೇವೆ ಸಲ್ಲಿಸುತ್ತಿದ್ದ ಮೃತರು ಪತ್ನಿ, ಓರ್ವ ಪುತ್ರಿ ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ