ಉಡುಪಿ: ಜ.18ರಿಂದ ರಾಜ್ಯ ಜೂನಿಯರ್ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್

Update: 2019-01-11 12:52 GMT

ಉಡುಪಿ, ಜ.11: ಉಡುಪಿ ಜಿಲ್ಲಾ ಹ್ಯಾಂಡ್‌ಬಾಲ್ ಅಸೋಸಿಯೇಶನ್ ಹಾಗೂ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಶನ್ ಸಹಯೋಗ ದಲ್ಲಿ 17ನೆ ಕರ್ನಾಟಕ ರಾಜ್ಯ ಜೂನಿಯರ್ ಹ್ಯಾಂಡ್‌ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟವನ್ನು ಜ.18ರಿಂದ 20ರವರೆಗೆ ಉಡುಪಿ ಬೀಡಿನಗುಡ್ಡೆಯ ಮಹಾತ್ಮಗಾಂಧಿ ಬಯಲು ರಂಗಮಂದಿರ ಮೈದಾನದಲ್ಲಿ ಆಯೋಜಿಸಲಾಗಿದೆ.

19 ವರ್ಷದೊಳಗಿನ ಬಾಲಕ ಬಾಲಕಿಯರು ಈ ಪಂದ್ಯಾದಲ್ಲಿ ಭಾಗವಹಿಸ ಬಹುದಾಗಿದೆ. ಇದರಲ್ಲಿ ಸುಮಾರು 24 ಬಾಲಕರ ತಂಡ ಹಾಗೂ 15 ಬಾಲಕಿಯರ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಂದಾಜು ಒಟ್ಟು 800 ಕ್ರೀಡಾಪಟುಗಳು ಹಾಗೂ 30 ತೀರ್ಪುಗಾರರು ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಹ್ಯಾಂಡ್‌ಬಾಲ್ ಅಸೋಸಿಯೇಶನ್ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಜ.18ರಂದು ಬೆಳಗ್ಗೆ 9 ಗಂಟೆಗೆ ಪಂದ್ಯಾಟವನ್ನು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಉದ್ಘಾಟಿಸಲಿರುವರು. ಶಾಸಕ ಕೆ.ರಘುಪತಿ ಭಟ್ ಅಂಕಣವನ್ನು ಉದ್ಘಾಟಿಸಲಿರುವರು. ಜ.20ರಂದು ಸಂಜೆ 4 ಗಂಟೆಗೆ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಲಿದೆ. ಕ್ರೀಡಾಪಟುಗಳಿಗೆ ಉಚಿತ ವಸತಿ ಹಾಗೂ ಊಟ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಏಳು ಲಕ್ಷ ಬಜೆಟ್ ಅಂದಾಜಿಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಸೀತಾರಾಮ್ ಗೌಡ, ಉಪಾ ಧ್ಯಕ್ಷ ಸುದರ್ಶನ್ ನಾಯಕ್, ಕೋಶಾಧಿಕಾರಿ ನಿರುಪಮಾ ಪ್ರಸಾದ್, ಸಂಘಟನಾ ಕಾರ್ಯದರ್ಶಿ ರೋಹಿತ್ ಆರ್.ದೇವಾಡಿಗ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News