ಲಾಲ್‌ಬಹದ್ದೂರ್ ಶಾಸ್ತ್ರಿ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2019-01-11 15:13 GMT

ಬೆಂಗಳೂರು, ಜ. 11: ದೇಶದ ಮಾಜಿ ಪ್ರಧಾನಮಂತ್ರಿ ಲಾಲ್‌ಬಹದ್ದೂರ್ ಶಾಸ್ತ್ರಿಯವರು ಪ್ರತಿಯೊಬ್ಬ ರಾಜಕಾರಣಿಗಳಿಗೂ ಮಾರ್ಗದರ್ಶಕರು. ಅವರ ಆದರ್ಶಗಳನ್ನು ನಾವೆಲ್ಲರೂ ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ 53ನೆ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ದೇಶ ಕಾಯುವ ಸೈನಿಕರಿಗೆ ಜೈ ಜವಾನ್, ದೇಶಕ್ಕೆ ಅನ್ನ ನೀಡುವ ರೈತನಿಗೆ ಜೈ ಕಿಸಾನ್ ಎಂಬ ಮಂತ್ರಘೋಷ ಮಾಡಿದವರು ಶಾಸ್ತ್ರಿ. ಅವರು ಇಂದಿಗೂ ಎಂದಿಗೂ ದೇಶದ ಎಲ್ಲ ಜನರ ಮನದಾಳದಲ್ಲಿದ್ದಾರೆ ಎಂದು ಸ್ಮರಿಸಿದರು.

ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಸಂಸದೀಯ ಕಾರ್ಯದರ್ಶಿ ಐವಾನ್ ಡಿಸೋಜಾ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳು ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News