ಸಕಲೇಶಪುರ ಪಟ್ಟಣದ ರಸ್ತೆ ಅಗಲೀಕರಣ ನಿರ್ಣಯ ವಿಚಾರ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Update: 2019-01-11 15:57 GMT

ಬೆಂಗಳೂರು, ಜ.11: ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಬಿ.ಎಂ.ರಸ್ತೆ ಅಗಲೀಕರಣಕ್ಕೆ ಲೋಕೋಪಯೋಗಿ ಇಲಾಖೆ ಕೈಗೊಂಡಿದ್ದ ನಿರ್ಣಯ ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

 ಈ ಕುರಿತಂತೆ ಎಚ್.ಎಸ್.ಧರ್ಮರಾಜ್ ಸೇರಿ ಇತರೆ 10ಕ್ಕೂ ಹೆಚ್ಚೂ ಸ್ಥಳೀಯರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ಕಾಯ್ದಿರಿಸಿತು. ಅಲ್ಲದೆ, ಅರ್ಜಿದಾರರ ಕಟ್ಟಡಗಳನ್ನು ತೆರವುಗೊಳಿಸದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ತೀರ್ಪು ಪ್ರಕಟಿಸುವವರೆಗೆ ವಿಸ್ತರಿಸಿತು. ಸಕಲೇಶಪುರ ಪಟ್ಟಣದ ಬಿ.ಎಂ.ರಸ್ತೆಯನ್ನು ಎರಡು ಕಿ.ಮೀ ಉದ್ದ ಅಗಲೀಕರಿಸಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿತ್ತು. ಇದರಿಂದ ರಸ್ತೆಯ ಎರಡು ಬದಿಯ 40 ಅಡಿ ಜಾಗದಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಲು ಸಹಾಯಕ ಆಯುಕ್ತರು ತೀರ್ಮಾನಿಸಿದ್ದರು. ಈ ಕ್ರಮ ಅರ್ಜಿದಾರರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜು.19ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಅರ್ಜಿದಾರರ ಕಟ್ಟಡ ತೆರವು ಕಾರ್ಯಾಚರಣೆಗೆ ಮಧ್ಯಂತರ ತಡೆ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News