×
Ad

ಐಇಡಿ ಸ್ಫೋಟ: ಸೇನಾ ಮೇಜರ್, ಸೈನಿಕ ಹುತಾತ್ಮ

Update: 2019-01-11 21:58 IST

ಜಮ್ಮು,ಜ.11: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಐಇಡಿ ಸ್ಫೋಟದಲ್ಲಿ ಸೇನೆಯ ಓರ್ವ ಮೇಜರ್ ಮತ್ತು ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೌಶೇರಾ ಸೆಕ್ಟರ್‌ನ ಲಾಮ್ ಗಡಿಯಲ್ಲಿ ನಿಯಂತ್ರಣ ರೇಖೆಯ ಸಮೀಪ ಗಸ್ತು ತಿರುಗುತ್ತಿದ್ದ ಯೋಧರನ್ನು ಗುರಿಯಾಗಿರಿಸಿ ಉಗ್ರರು ಈ ಸುಧಾರಿತ ಸ್ಫೋಟಕ ಸಾಧನವನ್ನು ಇರಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ ಮೇಜರ್ ಮತ್ತು ಯೋಧನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ ಸೇನೆಯು ಐಇಡಿ ಸ್ಫೋಟಗಳನ್ನು ನಡೆಸುವ ಬಗ್ಗೆ ಸೇನಾ ಜವಾನರಿಗೆ ಗಡಿ ಕ್ರಿಯಾ ಪಡೆ ಎಚ್ಚರಿಕೆ ನೀಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News