ಬೆಂಗಳೂರು: ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ

Update: 2019-01-11 16:32 GMT

ಬೆಂಗಳೂರು, ಜ. 11: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶೇ.40 ಅಥವಾ ಅದಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವವರಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಸಬ್ಸಿಡಿ ಸಾಲ ಸೌಲಭ್ಯವನ್ನು ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು 18 ರಿಂದ 55 ವಯೋಮಾನದ, 10 ವರ್ಷಗಳಿಂದ ರಾಜ್ಯದಲ್ಲಿ ವಾಸವಾಗಿರುವ ಮತ್ತು ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ 11,500ರೂ.ಹಾಗೂ ನಗರ ಪ್ರದೇಶದಲ್ಲಿ 24 ಸಾವಿರ ರೂ.ಗಳಿಗಿಂತ ಕಡಿಮೆ ಇರುವ ವಿಕಲಚೇತನರು ಅರ್ಜಿ ಸಲ್ಲಿಸಬಹುದು.

ಅರ್ಹ ಆಸಕ್ತ ವಿಕಲಚೇತನರು ಜ.15ರ ಒಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ವಿಕಲಚೇತನರ -ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂ.ನಗರ ಜಿಲ್ಲೆ ದೂ.ಸಂಖ್ಯೆ:080-26577412ನ್ನು ಸಂಪರ್ಕಿಸಲು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News