ಪೋಸ್ಕೊ ಪ್ರಕರಣ: ನ್ಯಾಯಾಂಗ ಬಂಧನ ವಿಸ್ತರಣೆ
Update: 2019-01-11 22:40 IST
ಉಡುಪಿ, ಜ.11: ಶಾಲಾ ಬಾಲಕರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದ ಆರೋಪಿ ಕುಂದಾಪುರದ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿ(40)ಯ ನ್ಯಾಯಾಂಗ ಬಂಧನವನ್ನು ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯವು ಮತ್ತೆ ವಿಸ್ತರಿಸಿ ಆದೇಶ ನೀಡಿದೆ.
ನ್ಯಾಯಾಂಗ ಬಂಧನ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಂದ್ರ ಕೆ. ಹೆಮ್ಮಾಡಿಯನ್ನು ಪೊಲೀಸರು, ಬೈಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಪೋಕ್ಸೋ ಪ್ರಕರಣ ಹಾಗೂ ಉಳಿದ 20 ಬಾಡಿ ವಾರೆಂಟ್ ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು.
ನ್ಯಾಯಾಧೀಶ ಸಿ.ಎಂ.ಜೋಶಿ ಆರೋಪಿಯ ನ್ಯಾಯಾಂಗ ಬಂಧನ ಅವಧಿ ಯನ್ನು ಜ.24ರವರೆಗೆ ವಿಸ್ತರಿಸಿ ಆದೇಶ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ವಿಶೇಷ ಸರಕಾರಿ ಅಭಿಯೋಜ ವಿಜಯ ವಾಸು ಪೂಜಾರಿ ಹಾಜರಿದ್ದರು.