ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ

Update: 2019-01-11 17:33 GMT

ಮಂಗಳೂರು, ಜ.11: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ನಗರದ ಪಂಪ್‌ವೆಲ್ ಜಂಕ್ಷನ್ ಬಳಿ ಎಕನಾಮಿಕ್ ಮತ್ತು ನಾರ್ಕೊಟಿಕ್ಸ್ ಕ್ರೈಂ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಂದರು ನಿವಾಸಿ ಅಬ್ದುಲ್ ಮಜಿದ್(41) ಬಂಧಿತ ಆರೋಪಿ.

ನಗರದಲ್ಲಿ ಎಕನಾಮಿಕ್ ಮತ್ತು ನಾರ್ಕೊಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಸಿಬಿ ಘಟಕದ ಅಧಿಕಾರಿ/ಸಿಬ್ಬಂದಿ ಶುಕ್ರವಾರ ಜಂಟಿ ಕಾರ್ಯಾಚರಣೆ ನಡೆಸಿ ದಾಳಿ ನಡೆಸಿದರು.

ಆರೋಪಿಯನ್ನು ವಶಕ್ಕೆ ಪಡೆದು, ಆತನ ಬಳಿ ಇದ್ದ 1 ಕೆಜಿ 110 ಗ್ರಾಂ ತೂಕದ 22,000 ರೂ.ಮೌಲ್ಯದ ಗಾಂಜಾ, ಹೋಂಡಾ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ಸ್ವಾಧೀನ ಪಡಿಸಿದ ಒಟ್ಟು ಸೊತ್ತಿನ ಮೌಲ್ಯ 47,100 ರೂ. ಎಂದು ಅಂದಾಜಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಆದೇಶದಂತೆ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ ನಿರ್ದೇಶನದಂತೆ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಪತ್ರಾಂಕಿತ ಅಧಿಕಾರಿಯಾಗಿ ನಗರ ಸಶಸ್ತ್ರ ಮೀಸಲು ಪಡೆಯ ಎಸಿಪಿ ಮುರುಗೆಪ್ಪ ಉಪಾಸೆ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕ ರಾಮಕೃಷ್ಣ ಕೆ.ಕೆ., ಪಿಎಸ್ಸೈ ಕಬ್ಬಾಳ್‌ರಾಜ್ ಹಾಗೂ ಎಕಾನಮಿಕ್ ನಾರ್ಕೊಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News