ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅನ್ನು ದೂರವಿಟ್ಟು ಎಸ್ಪಿ-ಬಿಎಸ್ಪಿ ಮೈತ್ರಿ ...!

Update: 2019-01-12 05:22 GMT

ಲಕ್ನೋ, ಜ.12: ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಜೊತೆಯಾಗಿ ಉತ್ತರ ಪ್ರದೇಶದಲ್ಲಿ ಮೈತ್ರಿಮಾಡಿಕೊಂಡು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದು, ಆದರೆ ಇವರೆಡು ಪಕ್ಷಗಳು ಕಾಂಗ್ರೆಸ್ ನ್ನು ಮಹಾಮೈತ್ರಿಯಿಂದ ದೂರವಿಟ್ಟಿದೆ.

ಎಸ್ ಪಿ ಮತ್ತು ಬಿಎಸ್ ಪಿ ಜೊತೆಯಾಗಿ ಲೋಕಸಭಾ ಚುನಾವಣೆ ಎದುರಿಸಲಿರುವ ವಿಚಾರವನ್ನು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಎಸ್ಪಿ ನಾಯಕಿ ಮಾಯಾವತಿ ಶನಿವಾರ ಅಧಿಕೃತವಾಗಿ  ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಿರುವರು.

ಕಾಂಗ್ರೆಸ್ ನ್ನು ಮಹಾಮೈತ್ರಿಯಿಂದ ದೂರ ಇಟ್ಟಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಇದೊಂದು ಅತ್ಯಂತ ಅಪಾಯಕಾರಿ ನಡೆ ಎಂದು ಅಭಿಪ್ರಾಯಪಟ್ಟಿದೆ.

ಕಾಂಗ್ರೆಸ್ ಏಕಾಂಗಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ ‘ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News