ಅಲೋಕ್ ವರ್ಮಾ ವಜಾ ಮೋದಿ ಸರಕಾರದ ದೊಡ್ಡ ಹುನ್ನಾರ: ಸಿದ್ದರಾಮಯ್ಯ

Update: 2019-01-12 13:34 GMT

ಹುಬ್ಬಳ್ಳಿ, ಜ. 12: ವಿಧಾನಸೌಧದಲ್ಲಿ ಹಣ ಪತ್ತೆ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಅಂತಿಮ ವರದಿ ಬರಬೇಕಿದೆ. ಅದಕ್ಕೂ ಮೊದಲೇ ಆ ಹಣ ಸಚಿವರಿಗೆ ಸಂಬಂಧಿಸಿದ್ದು ಎಂದು ಭಾವಿಸುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಯಾರೊ ಒಬ್ಬರ ಬಳಿಕ ಹಣ ಸಿಕ್ಕಿದೆ ಎಂದ ಮಾತ್ರಕ್ಕೆ ಅದು ಸಚಿವರದ್ದೇ ಹಣ ಎಂದು ಭಾವಿಸುವುದು ತಪ್ಪು. ತನಿಖೆ ಬಳಿಕ ತಪ್ಪಿತಸ್ಥರು ಯಾರು ಎಂದು ಗೊತ್ತಾಗಲಿದೆ ಎಂದರು.

ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ಸಂಬಂಧ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಬಗ್ಗೆ ಎರಡೂ ಪಕ್ಷಗಳ ವರಿಷ್ಠರು ಕೂತು ಮಾತುಕತೆ ಮೂಲಕ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ವಜಾ ಪ್ರಧಾನಿ ಮೋದಿ ನೇತೃತ್ವದ ಸರಕಾರದ ದೊಡ್ಡ ಹುನ್ನಾರ. ರಫೇಲ್ ಹಗರಣ ಬಯಲಾಗುತ್ತದೆ ಅನ್ನುವ ಕಾರಣಕ್ಕೆ ಮೋದಿ ಹೀಗೆ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಇದೇ ವೇಳೆ ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News