ಉಳ್ಳಾಲ: ಎಸೆಸೆಲ್ಸಿ ಪರೀಕ್ಷೆಗಾಗಿ ‘ಸಮುದಾಯದ ಮುಖಂಡರಿಗೆ ವಿಚಾರಗೋಷ್ಠಿ

Update: 2019-01-12 14:05 GMT

ಉಳ್ಳಾಲ, ಜ.12: ಎಸೆಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ವೃದ್ಧಿಸುವ ನಿಟ್ಟಿನಲ್ಲಿ ಮಂಗಳೂರು ತಾಲೂಕಿನ ಎಲ್ಲಾ ಮಸ್ಜಿದ್‌ನ ಖತೀಬರು, ಮದ್ರಸದ ಸದರ್‌ಮುಅಲ್ಲಿಂ ಹಾಗೂ ಅಧ್ಯಕ್ಷರುಗಳಿಗೆ ವಿಚಾರಗೋಷ್ಠಿಯು ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್‌ ಮತ್ತು ಸೈಯದ್ ಮದನಿ ಅರಬಿಕ್ ಟ್ರಸ್ಟ್ ಹಾಗೂ ಜಮೀಯ್ಯತುಲ್ ಫಲಾಹ್ ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಸೈಯದ್ ಮದನಿ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.

ಉಳ್ಳಾಲ ದರ್ಗಾದ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್‌ರ ಅಧ್ಯಕ್ಷತೆಯಲ್ಲಿ ನಡೆದ ವಿಚಾರಗೋಷ್ಠಿಯಲ್ಲಿ ಫಲಾಹ್‌ನ ದ.ಕ.ಮತ್ತು ಉಡುಪಿ ಜಿಲ್ಲಾಧ್ಯಕ್ಷ ಹಾಜಿ ಶಾಹುಲ್ ಹಮೀದ್ ವಿಷಯ ಮಂಡಿಸಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸುವಲ್ಲಿ ಸಮುದಾಯದ ಮುಖಂಡರು ಮಾರ್ಗದರ್ಶನ ನೀಡಬೇಕು ಎಂದರು.

ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಕಾರ್ಯಕ್ರಮ ಉದ್ಫಾಟಿಸಿದರು. ಅರೆಬಿಕ್ ಎಜುಕೇಶನ್ ಟ್ರಸ್ಟ್‌ನ ಮುಫತ್ತಿಸ್ ಸುಲೈಮಾನ್ ಸಖಾಫಿ ದುಆ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಮಂಗಳುರು ಜಮೀಯ್ಯತ್ತುಲ್ ಫಲಾಹ್ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಚಾಲ್, ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್‌ನ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ತ್ವಾಹಾ, ಕ್ಷೇತ್ರ ಸಮನ್ವಯಾಧಿಕಾರಿ ಡಾ. ಪ್ರಶಾಂತ್, ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್‌ನ ಉಪಾಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಅರಬಿಕ್ ಟ್ರಸ್ಟ್‌ನ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ, ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್‌ನ ಆಡಳಿತಾಧಿಕಾರಿ ಅಬ್ದುಲ್ ಲತೀಫ್, ಶಿಕ್ಷಣ ಸಂಯೋಜಕಿ ಜ್ಯೋತಿ ಮತ್ತಿತರರು ಭಾಗವಹಿಸಿದ್ದರು.

ಜಮೀಯ್ಯತ್ತುಲ್ ಫಲಾಹ್‌ನ ಕೋಶಾಧಿಕಾರಿ ಕೆ.ಎಂ.ಕೆ. ಮಂಜನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಎಂ.ಎಚ್ ಮಲಾರ್ ವಂದಿಸಿದರು. ಸಲಾಂ ಉಸ್ತಾದ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News