×
Ad

3 ರಾಜ್ಯಗಳ ಫಲಿತಾಂಶದಿಂದ ಭರವಸೆ ಕಳೆದುಕೊಳ್ಳಬೇಡಿ: ಕಾರ್ಯಕರ್ತರಿಗೆ ಅಮಿತ್ ಶಾ ಕರೆ

Update: 2019-01-12 21:44 IST

ಹೊಸದಿಲ್ಲಿ,ಜ.12: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಭರವಸೆಯನ್ನು ಕಳೆದುಕೊಳ್ಳದಂತೆ ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಮುಂದಿನ ಲೋಕಸಭಾ ಚುನಾವಣೆಯು ಪಕ್ಷಕ್ಕೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.

ತಮ್ಮ ಹಾಗೂ ತಮ್ಮ ಕುಟುಂಬಸ್ಥರು ಮತ್ತು ಸ್ನೇಹಿತರು ತಮ್ಮ ಮತಗಳನ್ನು ಬೆಳಿಗ್ಗೆ 10.30ರ ಒಳಗೆ ಚಲಾಯಿಸುವಂತೆ ನೋಡಿಕೊಳ್ಳುವಂತೆ ಅವರು ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ ಶಾ, ಜಾತಿವಾದ, ಸ್ವಜನಪಕ್ಷಪಾತ ಮತ್ತು ಓಲೈಕೆ ನೀತಿಯ ಕ್ಯಾನ್ಸರ್‌ನ ಕಾಣಿಕೆಯನ್ನು ಕಾಂಗ್ರೆಸ್ ಕಾಣಿಕೆಯಾಗಿ ನೀಡಿದ್ದು ಇದರಿಂದ ಪ್ರಜಾಪ್ರಭುತ್ವ ದುರ್ಬಲಗೊಂಡಿದೆ ಮತ್ತು ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಆರೋಪಿಸಿದ್ದಾರೆ.

ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡದಲ್ಲಿ ನಡೆದ ರಾಜ್ಯ ಚುನಾವಣೆಗಳಲ್ಲಿ ವಿರೋಧಿಗಳು ಗೆದ್ದಿರಬಹುದು ಆದರೆ ನಾವು ಸೋತಿಲ್ಲ. ಫಲಿತಾಂಶ ಉತ್ತಮವಾಗಿರಲಿಲ್ಲ. ಆದರೆ ನಾವು ನಮ್ಮ ನೆಲೆಯನ್ನು ಕಳೆದುಕೊಳ್ಳಲಿಲ್ಲ. ಹಾಗಾಗಿ ಕಾರ್ಯಕರ್ತರು ಭರವಸೆ ಕಳೆದುಕೊಳ್ಳುವ ಅಗತ್ಯವಿಲ್ಲ ಎಂದು ಹೊಸದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಬಿಜೆಪಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡುವ ವೇಳೆ ಶಾ ತಿಳಿಸಿದ್ದಾರೆ.

ಸೋಲು ಎಂಬುದರ ಅರ್ಥ ಕಾಂಗ್ರೆಸ್‌ನ ಸೋಲಿನಿಂದ ತಿಳಿಯುತ್ತದೆ. ಯಾಕೆಂದರೆ ಅದು ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಸಂಪೂರ್ಣವಾಗಿ ಮಾಯವಾಗಿದೆ ಎಂದು ಶಾ ಕುಟುಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News