ಮುಂಡಳ್ಳಿಯಲ್ಲಿ ಮಹಿಳೆಗೆ ಹಲ್ಲೆ: ದೂರು ದಾಖಲು
Update: 2019-01-12 23:04 IST
ಭಟ್ಕಳ, ಜ. 12: ಇಲ್ಲಿನ ಮುಂಡಳ್ಳಿಯ ನಸ್ತಾರ ಬಳಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಗೆ ಇಬ್ಬರು ಯುವಕರು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ಮುಂಡಳ್ಳಿ ನಸ್ತಾರ ನಿವಾಸಿ ನಸೀನ್ ಬಾನು ಎಂದು ತಿಳಿದುಬಂದಿದ್ದು, ಅವರನ್ನು ಇಲ್ಲಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳನ್ನು ಮಹ್ಮದ್ ಮಾರುಫ್ ಮತ್ತು ಮಹ್ಮದ್ ಲಯೀಕ್ ಎಂದು ತಿಳಿದು ಬಂದಿದೆ. ಮಹಿಳೆ ಮೇಲೆ ಹಲ್ಲೆ ಮಾಡಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತಿದ್ದಾರೆ.