ಲೋಕಸಭೆ ಚುನಾವಣಾ ಸಮಾಲೋಚನೆ: ಬಿಜೆಪಿ ಸಭೆ ಸೋಮವಾರಕ್ಕೆ ಮುಂದೂಡಿಕೆ- ಬಿಎಸ್‌ವೈ

Update: 2019-01-13 14:26 GMT

ಹೊಸದಿಲ್ಲಿ/ಬೆಂಗಳೂರು, ಜ. 13: ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ದತೆಯ ಬಗ್ಗೆ ಸಮಾಲೋಚನೆ ನಡೆಸಿದ್ದು, ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಆಗಮಿಸದ ಹಿನ್ನೆಲೆಯಲ್ಲಿ ಪಕ್ಷದ ಶಾಸಕರು, ಪರಿಷತ್ ಸದಸ್ಯರು, ಸಂಸದರ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ರವಿವಾರ ದಿಲ್ಲಿಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರ ಮನೆಯಲ್ಲಿ ಬಾವುಟ ಹಾರಿಸುವ ಕಾರ್ಯಕ್ರಮವನ್ನು ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಮುಂಬರುವ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕನಿಷ್ಟ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು. ನಾಳೆ(ಜ.14) ನಡೆಯಲಿರುವ ಸಭೆಗೆ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಆಗಮಿಸಲಿದ್ದು, ಚುನಾವಣೆ ಸಿದ್ದತೆ ಬಗ್ಗೆ ಸಮಾಲೋಚನೆ ನಡೆಸಲಿದ್ದು, ನಮ್ಮ ಎಲ್ಲ ಶಾಸಕರು ನಾಳೆ ಸಂಜೆ ರಾಜ್ಯಕ್ಕೆ ಹಿಂದಿರುಗಲಿದ್ದಾರೆ ಎಂದರು.

ಕಾಂಗ್ರೆಸ್ ಗಣೇಶ್ ಹುಕ್ಕೇರಿ ಬಿಜೆಪಿ ಸೇರ್ಪಡೆ ಸಂಬಂಧ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದು, ಗಣೇಶ್ ಹುಕ್ಕೇರಿ ಮತ್ತು ಅವರ ತಂದೆ ಪ್ರಕಾಶ್ ಹುಕ್ಕೇರಿ ಕಾಂಗ್ರೆಸ್ ಪಕ್ಷದಲ್ಲಿದ್ದು, ಅವರೇಕೇ ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದು ಯಡಿಯೂರಪ್ಪ ಇದೇ ವೇಳೆ ಪ್ರಶ್ನಿಸಿದರು.

ಬಿಜೆಪಿಯ 104 ಮಂದಿ ಶಾಸಕರ ಪೈಕಿ 100 ಮಂದಿ ಶಾಸಕರು ಮತ್ತು ಮೇಲ್ಮನೆ ಸದಸ್ಯರು ಹಾಗೂ ಸಂಸದರು, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಬೀಡುಬಿಟ್ಟಿರುವ ಬಿಜೆಪಿ ಮುಖಂಡರು ನಾಳೆಯೂ ದಿಲ್ಲಿಯಲ್ಲೇ ಉಳಿದುಕೊಳ್ಳಲಿದ್ದಾರೆಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News