ಮುಂಡ್ಕೂರು: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Update: 2019-01-13 14:45 GMT

ಬೆಳ್ಮಣ್, ಜ.13: ಕನ್ನಡ ಭಾಷೆಯು ಅತ್ಯಂತ ಸುಂದರ ಭಾಷೆಯಾಗಿದೆ. ಕನ್ನಡ ನಾಡು ನುಡಿಗಾಗಿ ಸದಾ ಶ್ರಮಿಸುವ ಅನಿವಾರ್ಯತೆ ಎದುರಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಉಳಿಸುವ ಮನಸ್ಸುಗಳು ಒಂದಾಗಬೇಕಾಗಿದೆ ಎಂದು ಮುಂಡ್ಕೂರು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಸಮ್ಮೇಳನ ಗೌರವಾಧ್ಯಕ್ಷ ವಾದಿರಾಜ್ ಶೆಟ್ಟಿ ಹೇಳಿದ್ದಾರೆ.

ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀದುರ್ಗಾಪರಮೇಶ್ವರಿ ದೇವಳದ ನಾನಾ ಪಾಟೇಕರ್ ಸಭಾಂಗಣದಲ್ಲಿ ನಂದಳಿಕೆ ವರಕವಿ ಮುದ್ದಣ ವೇದಿಕೆಯಲ್ಲಿ ಜರಗಿದ ಎರಡು ದಿನಗಳ ಉಡುಪಿ ಜಿಲ್ಲಾ 13ನೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪುಸ್ತಕಗಳನ್ನು ಬಿಡುಗಡೆಗೊಳಿಸಿದ ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಮಾತನಾಡಿ, ಕನ್ನಡ ಮಾತನಾಡುವವರ ಸಂಖ್ಯೆ ಕಡಿಮೆಯಾಗು ತ್ತಿದೆ. ಸರಕಾರದ ಧೋರಣೆ ಸರಿ ಇಲ್ಲ. ಕನ್ನಡ ಮಾಧ್ಯಮ ಶಾಲೆಯಲ್ಲಿ 7 ತರಗತಿಗೊಬ್ಬ ಶಿಕ್ಷಕನಿದ್ದರೆ ಏನೂ ಪ್ರಯೋಜನ ಇಲ್ಲ. ಇಂದು ಕನ್ನಡಿಗರು ಅಲ್ಪಸಂಖ್ಯಾತರಾಗುತ್ತಿದ್ದಾರೆ. ವರ್ಷಕ್ಕೆ 3ಸಾವಿರ ಕನ್ನಡ ಶಾಲೆಗಳು ಮುಚ್ಚುತ್ತಿವೆ. ಹೀಗೆ ಮುಂದುವರಿದಲ್ಲಿ ಮುಂದಿನ 5 ವರ್ಷಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಸಂಪೂರ್ಣ ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.

ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿ ದರು. ಪುಸ್ತಕ ಮಳಿಗೆಯನ್ನು ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ತಾಪಂ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಮೆರವಣಿಗೆಯನ್ನು ಮುಂಡ್ಕೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಿ.ಪಾಂಡುರಂಗ ಪ್ರಭು ಉದ್ಘಾಟಿಸಿದರು.

ದೇವಸ್ಥಾನದ ಪ್ರಧಾನ ಅರ್ಚಕ ಮಧ್ವಪತಿ ಆಚಾರ್ಯ, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್‌ಕುಮಾರ್ ಕಲ್ಕೂರ ಮಾತನಾಡಿದರು. ಈ ಸಂದರ್ಭದಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಎಚ್.ಶ್ರೀಧರ ಹಂದೆ ಅವರಿಗೆ ‘ಭಾಗವತ ನಾರಾಯಣ ಉಪ್ಪೂರು’ ವಿಶೇಷ ಪ್ರಶಸ್ತಿಯನ್ನು ಪ್ರದಾನ ಮಾಡ ಲಾಯಿತು.

ಎಚ್.ಸುಜಯೀಂದ್ರ ಹಂದೆ ಕೋಟ ಬರೆದ ಯಕ್ಷಗುರು ಪ್ರಾಚಾರ್ಯ ಎಂ.ನಾರ್ಣಪ್ಪ ಉಪ್ಪೂರು ಹಾಗೂ ಪೆರ್ವಾಜೆ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಅವನೀ ಉಪಾಧ್ಯ ಬರೆದ ಬದುಕ ಬೆಳಕು ಮಕ್ಕಳ ಕವಿತೆಗಳ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಮುಂಡ್ಕೂರು ಗ್ರಾಪಂ ಅಧ್ಯಕ್ಷೆ ಶುಭಾ ಪಿ.ಶೆಟ್ಟಿ ಧ್ವಜರೋಹಣವನ್ನು ನೆರವೇರಿಸಿದರು.

ಮುಂಡ್ಕೂರು ದೇವಳದ ಅರ್ಚಕ ಮಧ್ವಾಪತಿ, ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಸತ್ಯಶಂಕರ್ ಶೆಟ್ಟಿ, ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ವೈ.ಎಸ್., ಯುಗಪುರುಷದ ಭುವನಾಭಿರಾಮ ಉಡುಪ, ಡಾ. ಪ್ರಭಾಕರ್ ಶೆಟ್ಟಿಗಾರ್, ಮುಂಡ್ಕೂರು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಸುರೇಂದ್ರ ಶೆಟ್ಟಿ, ಕಾಪು ತಾಲೂಕು ಘಟಕ ಅಧ್ಯಕ್ಷ ಪುಂಡಲಿಕ ಮರಾಠೆ, ಬ್ರಹ್ಮಾವರ ತಾಲೂಕು ಅಧ್ಯಕ್ಷ ನಾರಾಯಣ ಮಡಿ, ಆನಂದ ಸಾಲಿಗ್ರಾಮ, ಅರುಣ್ ರಾವ್ ಮುಂಡ್ಕೂರು ಉಪಸ್ಥಿತರಿದ್ದರು.

ಕಾರ್ಕಳ ತಾಲೂಕು ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಸುಧಾಕರ ಪೊಸ್ರಾಲು ವಂದಿಸಿ ದರು. ಪ್ರಕಾಶ ನಾಯಕ್ ಹಾಗೂ ರಮ್ಯಾ ಅರುಣ ರಾವ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News