ಕಾರಿಗೆ ಅಪರಿಚಿತ ವಾಹನ ಢಿಕ್ಕಿ: ಮಹಿಳೆ ಮೃತ್ಯು

Update: 2019-01-13 15:48 GMT

ಬೆಂಗಳೂರು, ಜ.13: ಕಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಹೊಸ ನಿಜಗಲ್ ಗೇಟ್ ಬಳಿ ನಡೆದಿದೆ ಎನ್ನಲಾಗಿದೆ.

ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ಕ್ರೇಟ ಕಾರಿಗೆ ಭಾರೀ ಗಾತ್ರದ ವಾಹನ ಢಿಕ್ಕಿಯಾದ ಪರಿಣಾಮ ಕಾರಿನ ಹಿಂಬದಿ ಜಖಂಗೊಂಡಿದ್ದು, ಈ ವೇಳೆ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದವರ ಮಾಹಿತಿ ತಿಳಿದುಬಂದಿಲ್ಲ.

ಈ ಘಟನೆ ಕುರಿತು ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News