ಕೋಲಾರ: ಪೊಲೀಸ್ ಠಾಣೆ ಮುಂಭಾಗ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Update: 2019-01-13 17:40 GMT

ಕೋಲಾರ,ಜ.13: ವಿಷ ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ನಗರ ಪೊಲೀಸ್ ಠಾಣೆ ಮುಂಭಾಗ ನಡೆದಿದೆ.

ಕೆಜಿಎಫ್ ನ ಅನಿಮಲ್ ಮುರಳಿ (51) ಮೃತ ವ್ಯಕ್ತಿ. ಠಾಣೆ ಮುಂಭಾಗ ವಿಷ ಸೇವಿಸಿ ನರಳಾಡುತ್ತಿದ್ದ ಮುರಳಿಯನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದರಾದರೂ, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಅನಿಮಲ್ ಮುರಳಿ ಕಾಡು ಪ್ರಾಣಿ ರಕ್ಷಿಸುವ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಕೋಲಾರ ನಗರಕ್ಕೆ ಅವರು ಇತ್ತೀಚೆಗೆ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದರು ಎನ್ನಲಾಗಿದೆ.

ಮುರಳಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News