ಮುಂದಿನ ಸಂಪುಟ ಸಭೆಯಲ್ಲಿ ಭಡ್ತಿ ಮೀಸಲು ಕಾಯಿದೆ ಬಗ್ಗೆ ಅಂತಿಮ ನಿರ್ಧಾರ: ಡಾ.ಜಿ.ಪರಮೇಶ್ವರ್

Update: 2019-01-14 16:30 GMT

ಬೆಂಗಳೂರು, ಜ. 14: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ನೌಕರರ ಭಡ್ತಿ ಮೀಸಲಾತಿ ಕಾಯಿದೆ ಜಾರಿ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಸೋಮವಾರ ಭಡ್ತಿ ಮೀಸಲಾತಿ ಕಾಯಿದೆ ಜಾರಿಗೆ ಆಗ್ರಹಿಸಿ ವಿಧಾನಸೌಧದ ಮೂರನೆ ಮಹಡಿಯಲ್ಲಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಸರಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಮನವಿ ಸ್ವೀಕರಿಸಿ ಮಾತನಾಡುತ್ತಿದ್ದರು.

ಭಡ್ತಿ ಮೀಸಲಾತಿ ಕಾಯಿದೆ ಜಾರಿಗೆ ತರುವ ಸಂಬಂಧ ಈಗಾಗಲೇ ಚರ್ಚಿಸಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕಾಯಿದೆ ಜಾರಿ ಸಂಬಂಧ ಸರಕಾರ ನಿಲುವು ಪ್ರಕಟಿಸಲಾಗುವುದು. ಇದಕ್ಕೆ ಪರಿಶಿಷ್ಟ ನೌಕರರು ಸಹಕಾರ ನೀಡಬೇಕು ಎಂದು ಪರಮೇಶ್ವರ್ ಇದೇ ವೇಳೆ ಮನವಿ ಮಾಡಿದರು.

ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ ಪರಮೇಶ್ವರ್ ಇದೇ ವೇಳೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಅವರನ್ನು ಭೇಟಿ ಮಾಡಿ, ಭಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದರು ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News