ಮಂಗನ ಕಾಯಿಲೆ: ತುರ್ತು ಕ್ರಮಕ್ಕೆ ಜಯಮಾಲ ಸೂಚನೆ
Update: 2019-01-14 22:06 IST
ಉಡುಪಿ, ಜ.14: ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿ ರುವುದರಿಂದ ಉಡುಪಿ ಜಿಲ್ಲೆಯಲ್ಲಿ ಕಾಯಿಲೆ ವ್ಯಾಪಿಸದಂತೆ ತಡೆಗಟ್ಟಲು ಅಗತ್ಯವಾದ ಎಲ್ಲ ಮುಂಜಾಗ್ರತಾ ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಕುಂದಾಪುರ ತಾಲೂಕಿನ ಸಿದ್ಧಾಪುರ, ಹಳ್ಳಿಹೊಳೆ, ಹೊಸಂಗಡಿ, ಶಿರೂರು ಹಾಗೂ ಇತರ ಕಡೆಗಳಲ್ಲಿ ಮಂಗಗಳು ಸತ್ತ ಬಗ್ಗೆ ವರದಿಯಾಗಿದೆ. ಆದುದ ರಿಂದ ಜಿಲ್ಲೆಯಾದ್ಯಂತ ಈ ಕಾಯಿಲೆ ತಡೆಗೆ ಅಗತ್ಯವಾದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಆದ್ಯತೆ ಮೇರೆಗೆ ಕ್ಷಿಪ್ರವಾಗಿ ಕೈಗೊಂಡು ಸಾರ್ವಜನಿಕರ ಹಿತ ಕಾಪಾ ಡುವಂತೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.