ಪೋಸ್ಕೊ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Update: 2019-01-14 23:41 IST
ಬಂಟ್ವಾಳ, ಜ. 14: ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಸ್ಕೊ ಪ್ರಕರಣದಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಗಡಿಯಾರ ಜಂಕ್ಷನ್ ಸೋಮವಾರ ಬಂಧಿಸಿದ್ದಾರೆ.
ಇಲ್ಲಿನ ನಿವಾಸಿ ಅಬ್ದುಲ್ ಸಲಾಂ ಯಾನೆ ಸಲಾಂ (38) ಬಂಧಿತ ಆರೋಪಿಯಾಗಿದ್ದು, ಈತನನ್ನು 2ನೆ ಹೆಚ್ಚುವರಿ ಮತ್ತು ಸೆಸೆನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜ. 21ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಟ್ಲ ಎಸ್ಸೈ ಯಲ್ಲಪ್ಪ ನೇತೃತ್ವದಲ್ಲಿ ಸಿಬ್ಬಂದಿಗಳಾದ ಜಯಕುಮಾರ್, ಬಾಲಕೃಷ್ಣ, ಲೋಕೇಶ್, ರಕ್ಷಿತ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.