ಹುಬ್ಬಳ್ಳಿ: 100ನೇ ಜನ್ಮದಿನ ಆಚರಿಸಿದ ನಾಡೋಜ ಪಾಟೀಲ ಪುಟ್ಟಪ್ಪ; ಗೃಹ ಸಚಿವರಿಂದ ಸನ್ಮಾನ

Update: 2019-01-14 18:48 GMT

ಹುಬ್ಬಳ್ಳಿ, ಜ.14: ರಾಜ್ಯದ ಹಿರಿಯ ಪತ್ರಕರ್ತ ಹಾಗೂ ನಾಡೋಜ ಡಾ. ಪಾಟೀಲ್ ಪುಟ್ಟಪ್ಪನವರ 100ನೆಯ ಜನ್ಮದಿನದ ಅಂಗವಾಗಿ ಗೃಹಸಚಿವ ಎಂ.ಬಿ.ಪಾಟೀಲ್ ಅವರು ಹುಬ್ಬಳ್ಳಿಯ ವಿಶ್ವೇಶ್ವರ ನಗರದ ನಿವಾಸಕ್ಕೆ ತೆರಳಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಸಚಿವ ಐ.ಜಿ.ಸನದಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ, ಮುಖಂಡರಾದ ಮಹೇಂದ್ರ ಸಿಂಘಿ, ಬಾಬಾಜಾನ ಮುಧೋಳ, ಸದಾನಂದ ಡಂಗನವರ್, ನಿರಂಜನ ಹಿರೇಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜನ್ಮಶತಮಾನೋತ್ಸವದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಹಿತೈಷಿಗಳ ಸಮ್ಮುಖದಲ್ಲಿ ಪಾಟೀಲ ಪುಟ್ಟಪ್ಪ ಅವರು ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡರು. ನಾಡಿನ ಹಿರಿಯ ಹೋರಾಟಗಾರನಿಗೆ 100ನೇ ವರ್ಷದ ಹುಟ್ಟುಹಬ್ಬಕ್ಕೆ ಸಾರ್ವಜನಿಕರು ಶುಭಕೋರಿದರು. ಸೋಮವಾರ ಸಂಜೆ ಸತ್ತೂರು ಕಲಾಕ್ಷೇತ್ರದಲ್ಲಿ ಪಾಟೀಲ ಪುಟ್ಟಪ್ಪ ಶತಮಾನೋತ್ಸವ ಕಾರ್ಯಕ್ರಮ ಜರುಗಲಿದ್ದು, ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News