ರೈತರ ಸಾಲ ಮನ್ನಾ: ಸಹಕಾರಿ-ವಾಣಿಜ್ಯ ಬ್ಯಾಂಕ್‌ಗೆ 876 ಕೋಟಿ ರೂ.ಬಿಡುಗಡೆ

Update: 2019-01-15 14:01 GMT

ಬೆಂಗಳೂರು, ಜ.15: ಜ.11ರವರೆಗೆ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ 1.1 ಲಕ್ಷ ಸಹಕಾರಿ ಬ್ಯಾಂಕುಗಳ ಸಾಲ ಖಾತೆಗಳಿಗೆ 616 ಕೋಟಿ ರೂ. ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ 58 ಸಾವಿರ ಸಾಲ ಖಾತೆಗಳಿಗೆ 260 ಕೋಟಿ ರೂ. ರೈತರ ಬೆಳೆಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಲಾಗಿದೆ.

ಈ ಎರಡೂ ಬ್ಯಾಂಕುಗಳಲ್ಲಿ ಒಟ್ಟು 1.7 ಲಕ್ಷ ಸಾಲ ಖಾತೆಗಳಳಿಗೆ 876 ಕೋಟಿ ರೂ. ಗಳಷ್ಟು ಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಿದಂತಾಗಿದೆ. ಜ.11ರವರೆಗೆ ಒಟ್ಟು 10 ಲಕ್ಷಕ್ಕೂ ಹೆಚ್ಚು ರೈತರು ಸಾಲ ಮನ್ನಾ ಯೋಜನೆಗಾಗಿ ಅರ್ಹತೆ ಹೊಂದಿದ್ದು, ಸಹಕಾರಿ ಬ್ಯಾಂಕುಗಳ ಹಾಗೂ ವಾಣಿಜ್ಯ ಬ್ಯಾಂಕುಗಳ ಸಾಲ ಖಾತೆಗಳ ಜಿಲ್ಲಾವಾರು ವಿವರ ಇದರೊಂದಿಗೆ ಲಗತ್ತಿಸಿದೆ.

ಸಾಲಖಾತೆಗಳಿಗೆ ಮನ್ನಾ ಮೊತ್ತವನ್ನು ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಿಯಮಿತವಾಗಿ ಪಾವತಿಸಲಾಗುತ್ತಿದೆ. ಸಹಕಾರಿ ಬ್ಯಾಂಕುಗಳಲ್ಲಿ ಸಾಲವನ್ನು ತೀರಿಸುವ ವಾಯಿದೆ ಮುಗಿದ ನಂತರ ಮನ್ನಾ ಮೊತ್ತ ಬಿಡುಗಡೆ ಮಾಡಲಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News