ಫೆಬ್ರವರಿಯಲ್ಲಿ ಸ್ವಚ್ಛ ನಗರ ಪಟ್ಟಿ ಬಿಡುಗಡೆ ಹಿನ್ನೆಲೆ: ಉತ್ತಮ ರ‍್ಯಾಂಕ್‌ ಪಡೆಯಲು ಬಿಬಿಎಂಪಿ ಕಸರತ್ತು

Update: 2019-01-15 16:02 GMT

ಬೆಂಗಳೂರು, ಜ.15: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಸ್ವಚ್ಛ ಸರ್ವೇಕ್ಷಣಾ ಅಭಿಯಾನದ ರ‍್ಯಾಂಕಿಂಗ್ ಪಟ್ಟಿಯನ್ನು 4 ತಿಂಗಳು ಮುಂಚಿತವಾಗಿ ಬಿಡುಗಡೆ ಮಾಡಲಾಗುತ್ತಿದೆ.

ಸ್ವಚ್ಛ ನಗರಗಳನ್ನು ಗುರುತಿಸಲು ಕೇಂದ್ರ ಸರಕಾರ ಪ್ರತಿ ವರ್ಷ ಸರ್ವೇಕ್ಷಣಾ ಅಭಿಯಾನ ನಡೆಸುತ್ತಿದೆ. ಅಭಿಯಾನದ ನಂತರ ಸ್ವಚ್ಛ ನಗರಗಳ ಪಟ್ಟಿಯನ್ನು ಜೂನ್ ನಂತರ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ, ಈ ವರ್ಷ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್‌ನಲ್ಲೇ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವುದರಿಂದ ಫೆಬ್ರವರಿ ಅಂತ್ಯದಲ್ಲಿ ಸ್ವಚ್ಛ ನಗರಗಳ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಹಿಂದಿನ ವರ್ಷಗಳಲ್ಲಿ ಕಳಪೆ ಸ್ಥಾನ ಪಡೆದಿದ್ದ ಬೆಂಗಳೂರಿಗೆ ಈ ಬಾರಿಯಾದರೂ ಉತ್ತಮ ರ‍್ಯಾಂಕ್ ಸಿಗುವಂತಾಗಲು ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.

ಬ್ಲಾಕ್ ಸ್ಪಾಟ್‌ಗಳ ತೆರವು, ತ್ಯಾಜ್ಯ ಸಮರ್ಪಕ ವಿಲೇವಾರಿ ಮತ್ತು ಸಂಸ್ಕರಣೆ ಸೇರಿ ಇನ್ನಿತರ ಕೆಲಸ ಮಾಡುತ್ತಿದೆ. ಆದರೆ, ಬಿಬಿಎಂಪಿ ತಲೆನೋವಾಗಿರುವುದು ಸಾರ್ವಜನಿಕ ಪಾಲ್ಗೊಳ್ಳುವಿಕೆ. ಅದಕ್ಕಾಗಿ ಎಫ್‌ಎಂ ರೇಡಿಯೋ, ಟಿಟ್ವರ್, ಫೇಸ್‌ಬುಕ್ ಸೇರಿ ಇನ್ನಿತರ ಮಾಧ್ಯಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಬಿಬಿಎಂಪಿ ಮಾಡುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News