ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ

Update: 2019-01-15 16:21 GMT

ಬೆಂಗಳೂರು, ಜ.15: ಕಾಂಗ್ರೆಸ್ ಮುಖಂಡ ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣದ ತನಿಖೆಯನ್ನ ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದಾರೆ.

ಸಿಸಿಬಿ ಡಿಸಿಪಿ ಎಸ್.ಗಿರೀಶ್ ಅವರ ನೇತೃತ್ವದಲ್ಲಿ ಎಸಿಪಿ ಬಾಲ್ರಾಜ್ ಅವರ ಮಾರ್ಗದರ್ಶನದಲ್ಲಿ ಶೂಟೌಟ್ ಪ್ರಕರಣದ ತನಿಖೆ ಆರಂಭವಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ, ಪ್ರಕರಣದ ತನಿಖೆಗಾಗಿ ಕೋರಿ ಕಡಬಗೆರೆ ಶ್ರೀನಿವಾಸ್ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ ಸಿಸಿಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ಹಿಂದೆ ವಿಚಾರಣೆ ನಡೆಸಿದ್ದ ಎಲ್ಲ ಆರೋಪಿಗಳನ್ನ ಮತ್ತೆ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News