​ಜ.16: ಹಜ್ ಯಾತ್ರಾರ್ಥಿಗಳ ‘ಕುರ್ರಾ’ ಪ್ರಕ್ರಿಯೆಗೆ ಸಿಎಂ ಕುಮಾರಸ್ವಾಮಿ ಚಾಲನೆ

Update: 2019-01-15 17:30 GMT

ಮಂಗಳೂರು, ಜ.15: ರಾಜ್ಯ ಹಜ್ ಸಮಿತಿಯಿಂದ ಪ್ರಸಕ್ತ ವರ್ಷದ ಹಜ್ ಯಾತ್ರಾರ್ಥಿಗಳನ್ನು ಆರಿಸುವ ‘ಕುರ್ರಾ’ ಆಯ್ಕೆ ಪ್ರಕ್ರಿಯೆಯು ಜ.16ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.

ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಹಚ್ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೋಶನ್ ಬೇಗ್, ಕೇಂದ್ರದ ಮಾಜಿ ಸಚಿವ ಕೆ. ರಹಮಾನ್ ಖಾನ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ರಾಜ್ಯ ಹಜ್ ಸಮಿತಿಯ ಸದಸ್ಯ ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ‘ವಾರ್ತಾಭಾರತಿ’ಗೆ ತಿಳಿಸಿದ್ದಾರೆ.

ಪ್ರಸಕ್ತ ವರ್ಷ 13,988 ಹಜ್ ಯಾತ್ರಾ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಈ ಪೈಕಿ 6,701 ಮಂದಿಗೆ ಹಜ್‌ಗೆ ತೆರಳಲು ಸರಕಾರ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News