ಪಿಎಫ್‌ಐಯಿಂದ ರಾಜ್ಯಾದ್ಯಂತ 30 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

Update: 2019-01-16 06:46 GMT

ಬೆಂಗಳೂರು, ಜ.16: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ದ ರಾಷ್ಟ್ರೀಯ ಸ್ಕಾಲರ್‌ಶಿಪ್ ಯೋಜನೆ 2018-19 ಇದರ ಅಂಗವಾಗಿ, ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸಮಿತಿಯ ವತಿಯಿಂದ ಸ್ಕಾಲರ್‌ಶಿಪ್ ವಿತರಣಾ ಕಾರ್ಯಕ್ರಮವು ರಾಜ್ಯದ ವಿವಿಧೆಡೆಗಳಲ್ಲಿ ಆಯೋಜಿಸಲಾಗಿತ್ತು.

ರಾಜ್ಯದ 8 ಕಡೆಗಳಲ್ಲಿ ಸ್ಕಾಲರ್‌ಶಿಪ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪಿಎಫ್‌ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಸಿರ್ ಹಸನ್ ಮೈಸೂರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ರಾಜ್ಯಾಧ್ಯಕ್ಷ ಮುಹಮ್ಮದ್ ಸಾಕಿಬ್ ಬೆಂಗಳೂರಿನಲ್ಲಿ ನಡೆದ ಸಮಾರೋಪ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಕಾನೂನು, ಪತ್ರಿಕೋದ್ಯಮ, ವೈದ್ಯಕೀಯ, ತಾಂತ್ರಿಕ, ಸಮಾಜ ಸೇವೆ, ಡಿಪ್ಲೋಮಾ, ಆಡಳಿತಾತ್ಮಕ ಸೇವೆ, ಚಾರ್ಟರ್ಡ್ ಅಕೌಂಟೆಂಟ್ ಮೊದಲಾದ ಕ್ಷೇತ್ರಗಳಲ್ಲಿ ಪದವಿ ಮತ್ತು ಉನ್ನತ ಶಿಕ್ಷಣ ಪಡೆಯುತ್ತಿರುವ ಅರ್ಹ 452 ವಿದ್ಯಾರ್ಥಿಗಳನ್ನು ಗುರುತಿಸಿ, ಒಟ್ಟು 30 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News