ಸಿಬಿಐ ಹಂಗಾಮಿ ಮುಖ್ಯಸ್ಥ ರಾವ್ ನೇಮಕ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

Update: 2019-01-16 06:20 GMT

ಹೊಸದಿಲ್ಲಿ, ಜ.16: ಸಿಬಿಐ ಹಂಗಾಮಿ ನಿರ್ದೇಶಕರಾಗಿ ಎಂ. ನಾಗೇಶ್ವರ ರಾವ್ ನೇಮಕ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಯನ್ನು ಮುಂದಿನ ವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಬುಧವಾರ ಸಮ್ಮತಿ ಸೂಚಿಸಿದೆ.

ರಾವ್ ಅವರನ್ನು ಜ.10 ರಂದು ಹಂಗಾಮಿ ನಿರ್ದೇಶಕರಾಗಿ ನೇಮಕ ಮಾಡಿರುವ ಆದೇಶವನ್ನು ರದ್ದುಪಡಿಸಬೇಕೆಂದು ಕೋರಿ ಸೋಮವಾರ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಯಾಗಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಸಿಬಿಐ ಮುಖ್ಯಸ್ಥ ಸ್ಥಾನದಿಂದ ಅಲೋಕ್ ವರ್ಮಾರನ್ನು ಪದಚ್ಯುತಗೊಳಿಸಲು ನಿರ್ಧರಿಸಿದ ಬಳಿಕ ನೂತನ ಸಿಬಿಐ ಮುಖ್ಯಸ್ಥರನ್ನು ನೇಮಕ ಮಾಡುವ ತನಕ ಸಿಬಿಐನ ಹೆಚ್ಚುವರಿ ನಿರ್ದೇಶಕ ರಾವ್‌ರನ್ನು ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿತ್ತು.

 ಪ್ರಧಾನಿ ಒಳಗೊಂಡಿರುವ ಉನ್ನತ ಮಟ್ಟದ ಸಮಿತಿಯ ಪ್ರಭಾವದಿಂದ ರಾವ್ ಅವರ ನೇಮಕ ಮಾಡಲಾಗಿದೆ ಎಂದು ಆರೋಪಿಸಿರುವ ಎನ್‌ಜಿಒ ಕಾಮನ್ ಕಾಸ್ ಹಾಗೂ ಆರ್‌ಟಿಐ ಕಾರ್ಯಕತೆರ್ ಅಂಜಲಿ ಭಾರದ್ವಾಜ್ ಸಿಬಿಐ ನಿರ್ದೇಶಕರ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿರಬೇಕೆಂದು ಆಗ್ರಹಿಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News