ಜ.18ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Update: 2019-01-16 13:49 GMT

ಬೆಂಗಳೂರು, ಜ. 16: ಪ್ರಸಕ್ತ ರಾಜ್ಯ ರಾಜಕೀಯಲ್ಲಿ ಆಗುತ್ತಿರುವ ದಿಢೀರ್ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಾಸಕರೊಂದಿಗೆ ಸಮಾಲೋಚನೆ ನಡೆಸಲು ಜ.18ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 3:30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಸಿದ್ದರಾಮಯ್ಯರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News