ಉಡುಪಿಯಲ್ಲಿ ಮತದಾರರ ಸಹಾಯವಾಣಿ

Update: 2019-01-16 15:31 GMT

ಮಣಿಪಾಲ, ಜ.16: ಚುನಾವಣಾ ಆಯೋಗದ ನಿರ್ದೇಶನದಂತೆ ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ-2019ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಯ ಸಮಗ್ರ ಮಾಹಿತಿಗಳನ್ನು ಸಾರ್ವಜನಿಕರು ಪಡೆಯಲು ಅನುಕೂಲವಾಗುವಂತೆ ಉಡುಪಿ ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ (ವೋಟರ್ ಹೆಲ್ಫ್‌ಲೈನ್)ವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆಯಲಾಗಿದೆ.

ಸಾರ್ವಜನಿಕರು ತಮ್ಮ ಲ್ಯಾಂಡ್‌ಲೈನ್ ಅಥವಾ ಬಿಎಸ್ಸೆನ್ನೆಲ್ ಮೊಬೈಲ್‌ನಿಂದ ಟೋಲ್‌ಫ್ರೀ ನಂಬರ್: 1950ಕ್ಕೆ ಕರೆ ಮಾಡಿ ತಮಗೆ ಬೇಕಾದ ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಮಾಹಿತಿಗಳನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರವನ್ನು ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉದ್ಘಾಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News