×
Ad

ಜ.17: ಆಪರೇಷನ್ ಕಮಲ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Update: 2019-01-16 21:21 IST

ಉಡುಪಿ, ಜ.16: ಕರ್ನಾಟಕ ರಾಜ್ಯದಲ್ಲಿ ಸುಲಲಿತವಾಗಿ ನಡೆಯುತ್ತಿರುವ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಬಿಜೆಪಿ ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ ಶಾಸಕರುಗಳಿಗೆ ಆಮಿಷ ಒಡ್ಡುತ್ತಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಬಿಜೆಪಿ ವಿರುದ್ಧ ಹಾಗೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ  ಜ.17ರ ಸಂಜೆ 4ಗಂಟೆಗೆ ಉಡುಪಿ ಅಜ್ಜರಕಾಡು ಮೈದಾನ ಬಳಿ ಇರುವ ಹುತಾತ್ಮ ಸ್ಮಾರಕ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಜಿಲ್ಲೆಯ ವಿವಿಧ ಘಟಕಗಳ ಪದಾಧಿಕಾರಿಗಳು, ಯುವಕ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸ ಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News