ಅಂತರ್ ಕಾಲೇಜು ಪುರುಷರ ಕಬಡ್ಡಿ :ಆಳ್ವಾಸ್ ಮೂಡಬಿದ್ರೆ ಚಾಂಪಿಯನ್

Update: 2019-01-16 15:58 GMT

ಉಡುಪಿ, ಜ.16: ಉಡುಪಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಅಂತರ್ ಕಾಲೇಜು ಮಟ್ಟದ ಪುರುಷರ ಕಬಡ್ಡಿ ಟೂರ್ನಿಯಲ್ಲಿ ಆಳ್ವಾಸ್ ಕಾಲೇಜು ಮೂಡುಬಿದಿರೆ ತಂಡ ಚಾಂಪಿಯನ್ ಆಗಿ ಮೂಡಿಬಂದಿತು.

ಉಡುಪಿ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡ ರನ್ನರ್ ಅಪ್ ಸ್ಥಾನ ಪಡೆದರೆ, ಉಡುಪಿಯ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜು ತಂಡ ಮೂರನೇ ಸ್ಥಾನಿಯಾಯಿತು. ಉಳಿದಂತೆ ಕೊಣಾಜೆಯ ಯುನಿವರ್ಸಿಟಿ ಕ್ಯಾಂಪಸ್ ಕಾಲೇಜು ನಾಲ್ಕನೇ ಕೋಟೇಶ್ವರದ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡ ಐದನೇ, ಕುಂದಾಪುರದ ಬಿ.ಬಿ. ಹೆಗ್ಡೆ ಪದವಿ ಕಾಲೇಜು ಆರನೇ, ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡ ಏಳನೇ ಹಾಗೂ ಕುಂದಾಪುರದ ಭಂಡಾರಕಾರ್ಸ್‌ ಕಾಲೇಜು ಎಂಟನೇ ಸ್ಥಾನ ಪಡೆದವು.

ವಿಜೇತರಿಗೆ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಬಹುಮಾನಗಳನ್ನು ವಿತರಿಸಿದರು. ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ರಾಜೇಂದ್ರ ಸುವರ್ಣ, ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಕೆ., ಮಂಗಳೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಅಧ್ಯಕ್ಷ ವೇಣುಗೋಪಾಲ ನೊಂಡ ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು. ಅವಿಭಜಿತ ದ.ಕ. ಜಿಲ್ಲೆಗಳ ಒಟ್ಟು 24 ಕಾಲೇಜು ತಂಡಗಳು ಸ್ಪರ್ಧಿಸಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News