×
Ad

ಮದುವೆಯಾಗುವುದಾಗಿ ನಂಬಿಸಿ ವೈದ್ಯನಿಂದ ಅತ್ಯಾಚಾರ: ಆರೋಪ

Update: 2019-01-16 22:10 IST

ಬೆಂಗಳೂರು, ಜ.16: ವೈದ್ಯನೊಬ್ಬ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿರುವ ಆರೋಪ ಇಲ್ಲಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ನಗರದ ಬಾಣಸವಾಡಿಯ ಎಚ್‌ಜಿಆರ್ ಬಡವಾಣೆಯಲ್ಲಿ ಈ ಘಟನೆ ನಡೆದಿದ್ದು, ವೈದ್ಯ ವಿ.ಎಲ್.ಮನೋಜ್‌ಕುಮಾರ್ ಎಂಬಾತ ಈ ಕೃತ್ಯವೆಸಗಿರುವುದಾಗಿ ಯುವತಿ ಆರೋಪಿಸಿದ್ದಾಳೆ ಎನ್ನಲಾಗಿದೆ.

ಯುವತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯ ಮಾಡಿಕೊಂಡಿದ್ದ ಮನೋಜ್‌ಕುಮಾರ್, ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು, ಅತ್ಯಾಚಾರವೆಸಗಿರುವುದಾಗಿ ಹೇಳಲಾಗುತ್ತಿದೆ. ಈ ಸಂಬಂಧ ಸಂತ್ರಸ್ಥೆ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News