ಕೆಪಿಎಸ್ಸಿ: ಅಂತಿಮ ಆಯ್ಕೆಪಟ್ಟಿ ಪ್ರಕಟ
Update: 2019-01-16 22:17 IST
ಬೆಂಗಳೂರು, ಜ.16: ಕರ್ನಾಟಕ ಲೋಕಸೇವಾ ಆಯೋಗವು ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ವಿವಿಧ ವಿಷಯಗಳ ಶಿಕ್ಷಕರ ಹುದ್ದೆಗಳು ಹಾಗೂ ಇನ್ನಿತರ ಇಲಾಖೆಗಳ ವಿವಿಧ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಜ.8 ಮತ್ತು 9ರಂದು ಆಯೋಗದ ವೆಬ್‌ಸೈಟ್ www.kpsc.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.