ಶಾಲಾ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ: ಚಾಲಕ ಸಾವು

Update: 2019-01-16 16:52 GMT

ಹುಬ್ಬಳ್ಳಿ,ಜ.16: ಶಾಲಾ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿಯ ನೆಲೂಡಿ ಗ್ರಾಮದ ಬಳಿ ಇಂದು ಮುಂಜಾನೆ ಜರುಗಿದೆ. 

ಶಾಲಾ ವಾಹನ ಚಾಲಕ ಬಸನಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದು, ಖಾಸಗಿ ಬಸ್‌ನಲ್ಲಿದ್ದ ಹತ್ತು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಶಿರಗುಪ್ಪಿ ವಿದ್ಯಾನಿಧಿ ಶಾಲೆಯ ವಿದ್ಯಾರ್ಥಿಗಳನ್ನು ಕರೆತರಲು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಖಾಸಗಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News