ಅಶೋಕಪುರಂ ರೈಲ್ವೆ ನಿಲ್ದಾಣದವರೆಗೆ ವಿಸ್ತರಣೆಗೊಂಡ ವಿಶ್ವಮಾನವ ಎಕ್ಸ್ ಪ್ರೆಸ್ ರೈಲು

Update: 2019-01-16 17:31 GMT

ಮೈಸೂರು,ಜ.16: ವಿಶ್ವಮಾನವ ಎಕ್ಸ್ ಪ್ರೆಸ್ ರೈಲು (ಹುಬ್ಬಳ್ಳಿ-ಮೈಸೂರು-ಹುಬ್ಬಳ್ಳಿ) ಸೇವೆಯನ್ನು ಅಶೋಕಪುರಂವರೆಗೆ ವಿಸ್ತರಿಸಲಾಗಿದ್ದು, ಇಂದು ಅಶೋಕಪುರಂ ರೈಲು ನಿಲ್ದಾಣದಲ್ಲಿ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಬೆಳಿಗ್ಗೆ 8.30ಕ್ಕೆ ಹುಬ್ಬಳ್ಳಿಯಿಂದ ಹೊರಡುವ ರೈಲು ರಾತ್ರಿ 10.49 ಕ್ಕೆ ಮೈಸೂರಿಗೆ ಆಗಮಿಸಲಿದೆ. 11.15 ಕ್ಕೆ ಅಶೋಕಪುರಂ ರೈಲ್ವೆ ನಿಲ್ದಾಣವನ್ನು ಬಂದು ಸೇರಲಿದ್ದು, ವಿಶ್ವಮಾನವ ರೈಲು ಬೆಳಗಿನ ಜಾವ 5.15 ಕ್ಕೆ ಅಶೋಕಪುರಂ ರೈಲ್ವೆ ನಿಲ್ದಾಣದಿಂದ ಹುಬ್ಬಳ್ಳಿಗೆ ಹೊರಡಲಿದೆ.

ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಮನವಿಗೆ ಸ್ಪಂದಿಸಿದ ಕೇಂದ್ರ ರೈಲ್ವೆ ಸಚಿವ ಪೀಯೂಶ್ ಗೋಯಲ್ ಅವರಿಗೆ ಧನ್ಯವಾದ ತಿಳಿಸಿದರು.

ಈ ಸಂದರ್ಭ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಅಪರ್ಣಾ ಗಾರ್ಗ್, ಉಪವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಜಯ್ ಕುಮಾರ್ ಸಿನ್ಹಾ, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಗರಪಾಲಿಕೆ ಸದಸ್ಯ ಶಿವಕುಮಾರ ಸೇರಿದಂತೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News