ಜಿಎಸ್‌ಟಿ ಕುರಿತ ಸರ್ಟಿಫಿಕೇಟ್ ಕೋರ್ಸ್ ಆರಂಭ
Update: 2019-01-17 19:53 IST
ಉಡುಪಿ, ಜ.17: ಉಡುಪಿ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಜಂಟಿ ಆಶ್ರಯದಲ್ಲಿ ದ್ವಿತೀಯ ಬಾರಿಗೆ ಜಿಎಸ್‌ಟಿ ಕುರಿತ 30 ದಿನಗಳ ಸರ್ಟಿಫಿಕೇಟ್ ಕೋರ್ಸ್‌ನ್ನು ಆರಂಭಿಸಲಾಯಿತು.
ಕಾರ್ಯಕ್ರಮವನ್ನು ಉಡುಪಿ ಛೇಂಬರ್ ಆಪ್ ಕಾಮರ್ಸ್‌ನ ಅಧ್ಯಕ್ಷ ಕೃಷ್ಣ ರಾವ್ ಕೊಡಂಚ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ರಾಜ್ಯ ತೆರಿಗೆ ವಿಭಾಗದ ಸಹಾಯಕ ಕಮಿಷನರ್ ಸಿದ್ದಪ್ಪಅಣ್ಣಿಗೇರಿ ಭಾಗವಹಿಸಿದ್ದರು. ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು.
ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ಉಮೇಶ್ ಮಯ್ಯ ಕಾರ್ಯಕ್ರಮ ಸಂಯೋಜಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಗೌರಿ ಎಸ್.ಭಟ್, ಐಕ್ಯೂಎಸಿ ಸಂಚಾಲಕ ಸೋಜನ್ ಕೆ.ಜಿ., ವಿದ್ಯಾರ್ಥಿ ಪ್ರತಿನಿಧಿ ಸಂಗೀತಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸುಭಾಶಿತ, ಅಲ್ಫೀಯ, ಪೂರ್ಣಿಮಾ ಭಟ್ ಕಾರ್ಯಕ್ರಮ ನಿರೂಪಿಸಿದರು. ರಶಿಕಾ ವಂದಿಸಿದರು.