'ಬಿಜೆಪಿಯ ರೆಸಾರ್ಟ್ ರಾಜಕೀಯ' ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು, ಜ.17: ರಾಜ್ಯದ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ ಬಿಜೆಪಿ ಆರಂಭಿಸಿರುವ ರೆಸಾರ್ಟ್ ರಾಜಕೀಯವನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಲ್ಲಿಕಟ್ಟೆಯಲ್ಲಿರುವ ಪಕ್ಷದ ಜಿಲ್ಲಾ ಕಚೇರಿಯ ಮುಂದೆ ಗುರುವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ‘ರಾಜ್ಯದಲ್ಲಿ ಯಶಸ್ವಿಯಾಗಿ ಆಡಳಿತ ನೀಡುತ್ತಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಆಪರೇಶನ್ ಕಮಲವು ಸಂಪೂರ್ಣ ವಿಫಲಗೊಳ್ಳುವುದರೊಂದಿಗೆ ಬಿಜೆಪಿ ವರಿಷ್ಠರು ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ. ರಾಜ್ಯ ಸರಕಾರವು ತನ್ನ ಅಧಿಕಾರ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ ಎಂದರು.
ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಆಪರೇಶನ್ ಕಮಲದಂತಹ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಬಿಜೆಪಿಯ ಶಾಸಕರು ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಮರೆತು ರೆಸಾರ್ಟ್‌ನಲ್ಲಿ ಕಾಲಹರಣ ಮಾಡುತ್ತಿರುವುದು ಖಂಡನೀಯ. ಇದನ್ನೆಲ್ಲ ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.
ಈ ಸಂದರ್ಭ ಮುಡಾ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್ ಖಾದರ್, ಜಿಪಂ ಸದಸ್ಯ ಕೆ.ಕೆ. ಶಾಹುಲ್ ಹಮೀದ್, ಯುವ ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ಕಾರ್ಯದರ್ಶಿಗಳಾದ ಕಳ್ಳಿಗೆ ತಾರಾನಾಥ ಶೆಟ್ಟಿ, ನವೀನ್ ಡಿಸೋಜ, ಬ್ಲಾಕ್ ಅಧ್ಯಕ್ಷರಾದ ಜೆ ಅಬ್ದುಲ್ ಸಲೀಂ, ಸಂತೋಷ ಕುಮಾರ್ ಶೆಟ್ಟಿ ಅಸೈಗೋಳಿ, ವಿಶ್ವಾಸ್ ಕುಮಾರ್ ದಾಸ್, ಸುರೇಂದ್ರ ಕಂಬಳಿ, ಬೇಬಿ ಕುಂದರ್, ಕಾರ್ಪೊರೇಟರ್‌ಗಳಾದ ಪುರುಷೋತ್ತಮ ಚಿತ್ರಾಪುರ, ಸಬಿತಾ ಮಿಸ್ಕಿತ್, ಪಕ್ಷದ ಮುಖಂಡರಾದ ಸಂತೋಷ ಕುಮಾರ್ ಶಟ್ಟಿ, ಪ್ರಸಾದ್ ರಾಜ್ ಕಾಂಚನ್, ಪದ್ಮನಾಭ ನರಿಂಗಾನ, ಸುರೇಖಾ ಚಂದ್ರಹಾಸ್, ನೀರಜ್ ಪಾಲ್, ಸಿ.ಎಂ. ಮುಸ್ತಫಾ, ಖಾಲಿದ್ ಉಜಿರೆ, ನಝೀರ್ ಬಜಾಲ್, ಟಿ.ಕೆ. ಸುದೀರ್, ಗುಲ್ಜಾರ್ ಬಾನು, ಶಕುಂತಳಾ ಕಾಮತ್, ಮಹಮ್ಮದ್ ಬ್ಯಾರಿ ಎಡಪದವು, ಗಿರೀಶ್ ಆಳ್ವ, ರಮಾನಂದ ಪೂಜಾರಿ, ಸಿದ್ದೀಕ್ ಪಾರೆ ಮತ್ತಿತರರು ಪಾಲ್ಗೊಂಡಿದ್ದರು.