ಕಲ್ಲಡ್ಕ: ಡಿಸೆಲ್ ಟ್ಯಾಂಕರ್ ಪಲ್ಟಿ; ಚಾಲಕನಿಗೆ ಗಾಯ

Update: 2019-01-17 16:03 GMT

ಬಂಟ್ವಾಳ, ಜ. 17: ಡಿಸೆಲ್ ಟ್ಯಾಂಕರ್‍ವೊಂದು ಪಲ್ಟಿಯಾದ ಪರಿಣಾಮ ಚಾಲಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆ ದಾಖಲಾದ ಘಟನೆ ಕಲ್ಲಡ್ಕ ಸಮೀಪದ ಪೂರ್ಲಿಪಾಡಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

ಡೀಸೆಲ್ ಹೊತ್ತುಕೊಂಡು ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಾಗುವ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದು ಟ್ಯಾಂಕರ್ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕ್ ಒಡೆದು ಡೀಸೆಲ್ ಸೋರಿಕೆಯಾಗಿದೆ. ಇದರಿಂದ ಕೆಲ ಸಮಯ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸ್ಥಳಕ್ಕೆ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಬಂಟ್ವಾಳ ನಗರ ಠಾಣಾ ಎಸ್ಸೈಚಂದ್ರಶೇಖರ್, ಮೆಲ್ಕಾರ್ ಟ್ರಾಫಿಕ್ ಎಸ್ಸೈ ಮಂಜುಳಾ ಹಾಗೂ ಅಗ್ನಿಶಾಮಕ ದಳದ ವರು ಅಗಮಸಿ ಮುಂಜಾಗ್ರತಾ ಕ್ರಮ ಕೈಗೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News