ಜ.20ಕ್ಕೆ ರಾಜ್ಯ ಮಟ್ಟದ ಸೌಂದರ್ಯ ಸ್ಪರ್ಧೆ ಆಡಿಷನ್

Update: 2019-01-17 17:28 GMT

ಬೆಂಗಳೂರು, ಜ.17: ಕ್ಲಿಕ್ ಮೈ ಪಿಕ್ಸ್ ಸಂಸ್ಥೆಯಿಂದ ಜ.20 ರಂದು ಮಲ್ಲೇಶ್ವರಂನ ಐರಾ ಹೊಟೇಲ್ ನಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಎಂಬ ರಾಜ್ಯ ಮಟ್ಟದ ಸೌಂದರ್ಯ ಸ್ಪರ್ಧೆಯ ಆಡಿಷನ್‌ನನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಕಿಶೋರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಇಂದಿನ ಯುವ ಜನತೆ ಪಾಶ್ಚಿಮಾತ್ಯ ಸಂಸೃತಿಯನ್ನು ಹೆಚ್ಚಾಗಿ ಅಳವಡಿಸಿಕೊಳ್ಳುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸ್ವರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ಸ್ಪರ್ಧೆಗೆ 18 ರಿಂದ 30 ವರ್ಷದ ವಯೋಮಾನದವರು ಭಾಗವಹಿಸಬಹುದು. ತರಬೇತಿ ಇಲ್ಲದವರಿಗೆ ನುರಿತ ತಜ್ಞರಿಂದ ಉಚಿತ ತರಬೇತಿ ನೀಡಲಾಗುತ್ತದೆ. ಫೆಬ್ರವರಿಯ ಕೊನೆ ವಾರದಲ್ಲಿ ಅಂತಿಮ ಸ್ವರ್ಧೆ ನಡೆಸಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 72041 11122 ಅನ್ನು ಸಂಪರ್ಕಿಸಬಹುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News